providing latest kannada news,film, social news. CONTACT US : 9164003239


MCN MEDIA NEWS

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿ ಉಂಟಾಗಿರುವ ವಿವಾದಗಳ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕರ್ನಾಟಕದ ಎನ್.ಡಿ.ಎ ನಿಯೋಗ ರಾಜ್ಯದ ಮುಖ್ಯ ಚುನಾವಣಾಧಿಕಾರಿಯನ್ನು ಭೇಟಿ ಮಾಡಿ ದೂರನ್ನು ಸಲ್ಲಿಸಿದ ಸಂದರ್ಭ.
ಈ ನಿಯೋಗದಲ್ಲಿ ಕೇಂದ್ರ ಸಚಿವರಾದ *ಶ್ರೀ ಹೆಚ್ ಡಿ ಕುಮಾರಸ್ವಾಮಿ* ಅವರು ಭಾಗಿಯಾಗಿದ್ದರು.

1 day ago | [YT] | 35

MCN MEDIA NEWS

ರಾಜ್ಯದ ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಹಾಗೂ ಅವರ ಭವಿಷ್ಯವನ್ನು ಭದ್ರಪಡಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಸಿವಿಲ್ ಸೇವೆಗಳ ಎಲ್ಲಾ ನೇರ ನೇಮಕಾತಿಗಳಲ್ಲಿ ಕ್ರೀಡಾ ಸಾಧಕರಿಗೆ ಶೇ. 2ರಷ್ಟು ಮೀಸಲಾತಿ ಕಲ್ಪಿಸಿ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಕ್ರೀಡಾಪಟುಗಳ ಸಾಧನೆಗೆ ಬೆನ್ನೆಲುಬಾಗಿ ನಿಲ್ಲಲು ಮತ್ತು ಅವರ ಭವ್ಯ ಭವಿಷ್ಯವನ್ನು ರೂಪಿಸಲು ಸರ್ಕಾರ ಸದಾ ಬದ್ಧವಾಗಿದೆ.#mcnmedianews #support #Karnataka #cmdkshivakumar #reservation

The Government of Karnataka has taken a significant step to support and encourage the State’s sporting talent. An official notification has been issued providing 2% reservation for meritorious sportspersons in all direct recruitment to civil services.

This initiative recognises the dedication and achievements of our athletes while creating greater opportunities for them to build a secure and promising future. Our Government remains committed to supporting our sportspersons and nurturing the next generation of sporting talent.

1 day ago | [YT] | 15

MCN MEDIA NEWS

*ಕೊಪ್ಪಳ: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಕೊಪ್ಪಳ ಶ್ರೀ ಗವಿಮಠದ ಅಭಿನವ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳವರಿಗೆ ಮೈಸೂರು ಜಿಲ್ಲಾಡಳಿತದಿಂದ ಗೌರವಪೂರ್ವಕ ಆಹ್ವಾನ ನೀಡಲಾಯಿತು.*

*ಮೈಸೂರು ಜಿಲ್ಲಾಧಿಕಾರಿ ಹಾಗೂ ದಸರಾ ಮಹೋತ್ಸವದ ವಿಶೇಷಾಧಿಕಾರಿ ಶ್ರೀ ಲಕ್ಷ್ಮಿಕಾಂತ ರೆಡ್ಡಿ ಅವರು ಇಂದು ಕೊಪ್ಪಳ ಶ್ರೀ ಗವಿಮಠಕ್ಕೆ ಭೇಟಿ ನೀಡಿ, ಅಭಿನವ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳವರಿಗೆ ಗೌರವಪೂರ್ವಕವಾಗಿ ಆಹ್ವಾನ ಪತ್ರಿಕೆ ನೀಡಿ, ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಆಹ್ವಾನಿಸಿದರು.*

*ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾಧಿಕಾರಿ ಶ್ರೀ ಸುರೇಶ್ ಇಟ್ನಾಳ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ವರ್ಣಿತ್ ನೇಗಿ ಸೇರಿದಂತೆ ಇನ್ನೂ ಅನೇಕ ಭಕ್ತರು, ಗಣ್ಯರು ಉಪಸ್ಥಿತರಿದ್ದರು*.

*ಕೊಪ್ಪಳ ಶ್ರೀ ಗವಿಮಠದ ಅಭಿನವ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳವರಿಗೆ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ದೊರೆತ ಈ ಗೌರವವು ಕೊಪ್ಪಳ ಜಿಲ್ಲೆ ಹಾಗೂ ಕಲ್ಯಾಣ ಕರ್ನಾಟಕದ ಜನತೆಗೆ ಹೆಮ್ಮೆಯ ಕ್ಷಣವಾಗಿದೆ.*

#MysuruDasara #Gavimatha #GavisiddeshwaraSwamiji #Koppal #Dasara2026
Gavimath Koppal Deputy Commissioner Koppal #mcnmedianews

1 day ago | [YT] | 10

MCN MEDIA NEWS

ಮಾಜಿ ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರ "96ನೇ ಜನ್ಮ ದಿನಾಚರಣೆ" ಹಾಗೂ "ಚುನಾವಣೆ ಸುಧಾರಣೆಯಿಂದ ಸಮಾಜದ ಸುಧಾರಣೆ" ಕುರಿತಾದ ಚಿಂತನ-ಮಂಥನ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು.

ಮಾಜಿ ಸಚಿವರಾದ ಪಿ.ಜಿ.ಆರ್. ಸಿಂಧ್ಯಾ, ಬಿ.ಸೋಮಶೇಖರ್, ಶಾಸಕರಾದ ಗಣೇಶ್ ಪ್ರಸಾದ್, ಸಮಾಜ ಸೇವಕರಾದ ತೇಜಸ್ವಿನಿ ಅನಂತಕುಮಾರ್, ರೈತ ಪರ ಹೋರಾಟಗಾರರಾದ ಚುಕ್ಕಿ ನಂಜುಂಡಸ್ವಾಮಿ, ಮಾಜಿ ಶಾಸಕರಾದ ಶಿವಶಂಕರ್, ನಂಜಯ್ಯನ ಮಠ, ಡಾ.ಎಂ.ಪಿ. ನಾಡಗೌಡ, ಪಟೇಲರ ಪುತ್ರರಾದ ಮಹಿಮಾ ಪಟೇಲ್, ತ್ರಿಶೂಲ್ ಪಟೇಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

2 days ago | [YT] | 46

MCN MEDIA NEWS

ಪ್ರದೇಶ ಕಾಂಗ್ರೆಸ್ ಸಮಿತಿಯ ಮೈಸೂರು ಗ್ರಾಮಾಂತರ ಜಿಲ್ಲೆಯ ನೂತನ ಅಧ್ಯಕ್ಷರಾಗಿ ಬೀರಿಹುಂಡಿ ಬಸವಣ್ಣ ಅವರು ಅಧಿಕಾರ ಸ್ವೀಕರಿಸಿದ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿಗಳು, ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯರು ಆದ ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಮಾಜಿ ಸಚಿವರಾದ ವೆಂಕಟೇಶ್, ನಿರ್ಗಮಿತ ಅಧ್ಯಕ್ಷರಾದ ವಿಜಯಕುಮಾರ್, ಶಾಸಕರಾದ ಅನಿಲ್ ಚಿಕ್ಕಮಾದು, ರವಿಶಂಕರ್, ದರ್ಶನ್ ಧ್ರುವ ನಾರಾಯಣ, ಡಾ. ತಿಮ್ಮಯ್ಯ, ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.#mcnmedianews #siddaramaiah

2 days ago | [YT] | 157

MCN MEDIA NEWS

ಮಹಾಲಕ್ಷ್ಮೀಲೇಔಟ್ ವಿಧಾನಸಭಾ ಕ್ಷೇತ್ರದ ರಾಣಿ ಅಬ್ಬಕ್ಕ ಆಟದ ಮೈದಾನದಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಹೆಚ್.ಎಸ್.ಮಂಜುನಾಥಗೌಡರವರ ನೇತೃತ್ವದಲ್ಲಿ 4 ದಿನಗಳ ಸಿ.ಎಂ.ಕಪ್ ಟೆನಿಸ್ ಬಾಲ್ ಅಂತರ-ಕಾಲೇಜು ಕ್ರಿಕೆಟ್ ಪಂದ್ಯಾವಳಿ ಪಾಲ್ಗೊಂಡು ಮಾತನಾಡಿದರು
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್ಎಸ್ ಮಂಜುನಾಥ್ ಗೌಡ, ಕಾಂಗ್ರೆಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮೈಸೂರ್ ಎಲೆಕ್ಟ್ರಿಕಲ್ ನಿಗಮದ ಅಧ್ಯಕ್ಷ ಮನೋಹರ್,ಬಿಬಿಎಂಪಿ ಮಾಜಿ ಸದಸ್ಯರಾದ ಎಸ್ ಕೇಶವಮೂರ್ತಿ, ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಜನಾರ್ಧನ್, ಕುಮಾರ್, ಪರಿಸರ ರಾಮಕೃಷ್ಣ ಶಿವಕುಮಾರ್,ಕಾರ್ಯದರ್ಶಿ ಅನಿಲ್, ಯುವ ಕಾಂಗ್ರೆಸ್ ಸ್ಯಾಮ್ಯೂಯಲ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಸಚಿವರಾದ ರಾಮಲಿಂಗ ರೆಡ್ಡಿ ಅವರು ಕ್ರೀಡಾಂಗಣದಲ್ಲಿ ಬ್ಯಾಟಿಂಗ್ ಆಡುವ ಮೂಲಕ ಆಟಗಾರರಲ್ಲಿ ಉತ್ಸಾಹ ತುಂಬಿ ಶುಭಾಶಯ ಕೋರಿದರು.

2 days ago | [YT] | 7

MCN MEDIA NEWS

ನಾಡಕುಸ್ತಿ ಜೋಡಿ ಕಟ್ಟುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ - ಡಾ. ಯತೀಂದ್ರ ಸಿದ್ದರಾಮಯ್ಯ.

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ 'ದಸರಾ ನಾಡಕುಸ್ತಿ' ಪಂದ್ಯಾವಳಿಯ ಸಾಂಪ್ರದಾಯಿಕ ಜೋಡಿ ಕಟ್ಟುವ ಕಾರ್ಯಕ್ರಮಕ್ಕೆ ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದರು.

ನಗರದ ಡಿ. ದೇವರಾಜ ಅರಸ್ ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ನೆರವೇರಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಚಾಲನೆ ನೀಡಿ, ಮಾತನಾಡಿದ ಸಚಿವರು, ಮೈಸೂರಿನ ಸಾಂಸ್ಕೃತಿಕ ಹಿರಿಮೆಯ ದಸರಾ ಮಹೋತ್ಸವದಷ್ಟೇ ನಮ್ಮ ಮಣ್ಣಿನ ಕ್ರೀಡೆಯಾದ ಕುಸ್ತಿಗೂ ಸುದೀರ್ಘವಾದ ಇತಿಹಾಸವಿದೆ. ಸ್ಥಳೀಯ ಹಾಗೂ ರಾಜ್ಯದ ಕ್ರೀಡಾಪಟುಗಳಿಗೆ ಸೂಕ್ತ ವೇದಿಕೆ ಮತ್ತು ಪ್ರೋತ್ಸಾಹ ನೀಡುವುದೇ ಈ ಕ್ರೀಡಾಕೂಟದ ಮುಖ್ಯ ಉದ್ದೇಶವಾಗಿದೆ ಎಂದರು.


ಇಂತಹ ಕ್ರೀಡೆಗಳಲ್ಲಿ ಸೋಲು ಗೆಲುವಿಗಿಂತ ಭಾಗವಹಿಸುವಿಕೆ ಮತ್ತು ಕ್ರೀಡಾಸ್ಪೂರ್ತಿ ಅತ್ಯಂತ ಮುಖ್ಯ ಎಂದು ತಿಳಿಸಿ, ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿರುವ ಎಲ್ಲಾ ಪೈಲ್ವಾನರಿಗೂ ಹಾಗೂ ಕ್ರೀಡಾಪಟುಗಳಿಗೂ ಶುಭ ಹಾರೈಸಿ ಅಭಿನಂದನೆ ಸಲ್ಲಿಸಿದರು.

ಇದೇ ವೇಳೆ 2026ರ ದಸರಾ ಕುಸ್ತಿ ಪಂದ್ಯಾವಳಿಯ ಅಧಿಕೃತ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಟಿ.ಎಸ್. ಶ್ರೀವತ್ಸ, ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಮಲ್ಲಿಕಾರ್ಜುನ ಬಾಲದಂಡಿ, ಅಪರ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ನಾಗೇಶ್. ಎಲ್, ದಸರಾ ಕುಸ್ತಿ ಸಮಿತಿಯ ಕಾರ್ಯಾಧ್ಯಕ್ಷರಾದ ಧರ್ಮೇಂದ್ರ, ಕಾರ್ಯದರ್ಶಿಗಳಾದ ಶ್ರೀ ನರಸಿಂಹ ಮೂರ್ತಿ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು, ಗಣ್ಯರು ಹಾಗೂ ನೂರಾರು ಕುಸ್ತಿಪಟುಗಳು ಉಪಸ್ಥಿತರಿದ್ದರು.

2 days ago | [YT] | 50

MCN MEDIA NEWS

ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಅಂಗವಾಗಿ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಇಂದು ಆಯೋಜಿಸಿದ್ದ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಬಿಕೆ ಹರಿಪ್ರಸಾದ್ ಅವರು ಭಾಗವಹಿಸಿ ಪೌರ ಕಾರ್ಮಿಕರನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ , ಮಾಜಿ ಮುಖ್ಯಮಂತ್ರಿ, ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯರಾದ ಸಿದ್ದರಾಮಯ್ಯ , ಕೆಪಿಸಿಸಿ ಉಪಾಧ್ಯಕ್ಷರಾದ ವಿ ಆರ್ ಸುದರ್ಶನ್ ಸೇರಿದಂತೆ ಹಾಲಿ ಮತ್ತು ಮಾಜಿ ಸಚಿವರು, ಶಾಸಕರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

2 days ago | [YT] | 30

MCN MEDIA NEWS

ಬಳ್ಳಾರಿ ಚಲೋ ಪಾದಯಾತ್ರೆಯ ಆರನೇ ದಿನವಾದ ಇಂದು ಗಂಗಾವತಿ ತಾಲೂಕಿನ ಮರಳಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬೈಕ್ ರ್ಯಾಲಿ ನಡೆಸಿದರು.

1 month ago | [YT] | 181

MCN MEDIA NEWS

ಕರ್ನಾಟಕ ಹಿಂದುಳಿದ ಜಾತಿಗಳ ಒಕ್ಕೂಟ ಆಯೋಜಿಸಿದ್ದ ಜನ ಜಾಗೃತಿ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಇದೇ ವೇಳೆ "ಸಮಾನತೆಯ ಸಂಕಲ್ಪ" ಹೆಸರಿನ‌ ಸ್ಮರಣ ಸಂಚಿಕೆಯನ್ನು ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದರು.

ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಸಚಿವರಾದ ಬೈರತಿ ಸುರೇಶ್, ಸಂತೋಷ್ ಲಾಡ್, ಡಾ.ಅಜಯಸಿಂಗ್, ಪುಟ್ಟರಂಗ ಶೆಟ್ಟಿ, ಮಧು ಬಂಗಾರಪ್ಪ, ಒಕ್ಕೂಟದ ಅಧ್ಯಕ್ಷ ರಾಮಚಂದ್ರಪ್ಪ ಮತ್ತಿತರ ಗಣ್ಯರು ವೇದಿಕೆಯಲ್ಲಿ ಹಾಜರಿದ್ದರು.

1 month ago | [YT] | 731